

ವಿಜಯವಾಣಿ ಸುದ್ದಿಜಾಲ ಉಡುಪಿ
ಯಾವುದೇ ಕಾಯಿಲೆಗಳಿಗೆ ಆಯುರ್ವೇದದಲ್ಲಿ ಉತ್ತಮವಾದ ಔಷಧ ಲಭ್ಯವಿದೆ. ನಾವು ಸೇವಿಸುವ ಆಹಾರ ಪದ್ಧತಿಯಿಂದಲೇ ಆರೋಗ್ಯ ಕಾಪಾಡಿಕೊಳ್ಳಬೇಕು. ಸುತ್ತಮುತ್ತಲಿನ ಪರಿಸರದಲ್ಲಿ ಸುಲಭವಾಗಿ ಲಭಿಸುವ ಧವಸ-ಧಾನ್ಯ ಮತ್ತು ಗಿಡಮೂಲಿಕೆಗಳ ಸಮರ್ಪಕ ಉಪಯೋಗದಿಂದ ಆರೋಗ್ಯ ವೃದ್ಧಿ ಮಾಡಿಕೊಳ್ಳಬಹುದು ಎಂದು ಆಯುರ್ವೇದ ವೈದ್ಯೆ ಡಾ. ಸಂಧ್ಯಾ ರಂಜನ್ ಮಾಹಿತಿ ನೀಡಿದರು.
ಉಡುಪಿಯ ಪುತ್ತೂರು ಬ್ರಾಹ್ಮಣ ಮಹಾಸಭಾದ ವತಿಯಿಂದ ಪುತ್ತೂರಿನ ದುರ್ಗಾಪರಮೇಶ್ವರಿ ದೇವಳದ ಸಭಾಗ್ರಹದಲ್ಲಿ ತಿಂಗಳ ಕಾರ್ಯಕ್ರಮದ ನಿಮಿತ್ತ ಆಯೋಜಿಸಿದ್ದ ಹಿತ್ತಲ ಗಿಡ ಮದ್ದು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾಸಭಾ ಅಧ್ಯಕ್ಷ ಚಂದ್ರಶೇಖರ ಅಡಿಗ ಸ್ವಾಗತಿಸಿದರು. ಕೋಶಾಧಿಕಾರಿ ಕೆ.ಜಿ. ರಾಮಚಂದ್ರರಾವ್, ಆಪದ್ಬಾಂಧವ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಜೋಷಿ, ನಿಕಟಪೂರ್ವ ಅಧ್ಯಕ್ಷೆ ಶುಭಾ ಬಾಳ್ತಿಲ್ಲಾಯ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಮಂಜುಳಾ ವಿ. ಪ್ರಸಾದ ಸಂಯೋಜನೆಯಲ್ಲಿ ವಿವಿಧ ಖಾದ್ಯಗಳ ಪ್ರಾತ್ಯಕ್ಷಿಕೆ ನಡೆಯಿತು. ಚೈತನ್ಯ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನಿರಂಜನ ಭಟ್ ವಂದಿಸಿದರು.