ಮುಂಡಾಜೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

Bel_swasthya-sankalpa
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್​ ಬೆಳ್ತಂಗಡಿ, ಮುಂಡಾಜೆ ವಲಯ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನಾ ಟಕ, ರೋವರ್ಸ್​ ಮತ್ತು ರೇಂರ್ಜಸ್​ ವಿಭಾಗ, ಜೂನಿಯರ್​ ರೆಡ್​ಕ್ರಾಸ್​ ಮುಂಡಾಜೆ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ "ಸ್ವಾಸ್ಥ ಸಂಕಲ್ಪ' ಕಾರ್ಯಕ್ರಮ ಮುಂಡಾಜೆ ಪ.ಪೂ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.

ಬೆಳ್ತಂಗಡಿ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಅಡೂರು ವೆಂಕಟ್ರಾಯ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲೆ ಜ್ವಾಲಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆ ತಾಲೂಕು ಸಮಿತಿ ಸದಸ್ಯ ಅಶ್ರಫ್​ ಆಲಿಕುಂಞಿ ಮುಂಡಾಜೆ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಜನಜಾಗೃತಿ ವೇದಿಕೆ ಮುಂಡಾಜೆ ವಲಯಾಧ್ಯಕ್ಷ ನಾಮದೇವ ರಾವ್​, ಯೋಜನೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ದನ ಮಾಚಾರು, ಸೇವಾ ಪ್ರತಿನಿಧಿಗಳಾದ ಸರಿತಾ, ದಿಶಾ ಜಿನೇಶ್​, ಚೇತನಾ ಚಾರ್ಮಾಡಿ ಉಪಸ್ಥಿತರಿದ್ದರು.

ರೇಂಜರ್​ ಲೀಡರ್​ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಜೂನಿಯರ್​ ರೆಡ್​ಕ್ರಾಸ್​ ಮುಖ್ಯಸ್ಥ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿದರು. ರಾ.ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ.ಆರ್​. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net