

ಕಾಸರಗೋಡು: ಪುಸ್ತಕಗಳ ಓದುವಿಕೆಯನ್ನು ಆಸಕ್ತಿದಾಯಕ ಹಾಗೂ ಪ್ರತಿಷ್ಠೆಯ ವಿಷಯವನ್ನಾಗಿಸುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯದಂತೆ ಲಕ್ಷ ಗ್ರಂಥಾಲಯ ಯೋಜನೆ ಆರಂಭಿಸಿದೆ. ಓದುವಿಕೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಸರ್ಕಾರದ ಅಧ್ಯಕ್ಷ ಡಾ.ಮಾನಸ ತಿಳಿಸಿದರು.
ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಲಕ್ಷ ಗ್ರಂಥಾಲಯಗಳ ಯೋಜನೆಯ ಪ್ರಚಾರಾರ್ಥ ಕರಪತ್ರ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭವನ ರೂವಾರಿಗಳಾದ ಡಾ.ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ದಂಪತಿಗೆ ಪುಸ್ತಕ ನೀಡಿ ಗಡಿನಾಡು ಕಾಸರಗೋಡಿನಲ್ಲಿ ಮನೆಗೊಂದು ಗ್ರಂಥಾಲಯ ಅಭಿಯಾನಕ್ಕೆ ಚಾಲನೆ ನೀಡಿದರು.
ಕಸಾಪ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ್ನಾರಾಯಣ್ ತೊಟ್ಟೆತ್ತೋಡಿ, ಪ್ರೊ.ಪಿ.ಎನ್.ಮೂಡಿತ್ತಾಯ, ಗಮಕ ಕಲಾ ಪರಿಷತ್ನ ಟಿ.ಶಂಕರನಾರಾಯಣ ಭಟ್, ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ, ರವಿ ನಾಯ್ಕಪು, ಡಾ.ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಉಪಸ್ಥಿತರಿದ್ದರು. ಪ್ರೊ.ಎ.ಶ್ರೀನಾಥ್ ಸ್ವಾಗತಿಸಿ, ನಿರೂಪಿಸಿದರು.