

ಕೊಪ್ಪ: ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎಂದು ಜೆಎಂಎ್ಸಿ ಕೋರ್ಟ್ ನ್ಯಾಯಾಧೀಶೆ ಎಂ.ಎನ್. ನಂದಿನಿ ತಿಳಿಸಿದರು.
ಬಾಳಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗ, ತಾಲೂಕು ಕಾನೂನು ಸೇವೆಗಳ ಸಮಿತಿ, ಅಭಿಯೋಜನ ಇಲಾಖೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರೋಟರಿ ಕೊಪ್ಪ ಮಲ್ನಾಡ್, ಕಂದಾಯ, ಆರೋಗ್ಯ, ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಗೆ ಸಮಾಜದಲ್ಲಿ ಕಾನೂನಿನ ನೆರವು ಮೂಲಕ ಸಹಜ ಬದುಕಿಗೆ ತರುವ ಅವಕಾಶವಿದೆ. ಸದೃಢ ಮಾನಸಿಕ ಸ್ಥಿತಿ ಹೊಂದುವ ಮೂಲಕ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಪ್ರಾಚಾರ್ಯ ಪ್ರೊ.ಎಸ್.ಅನಂತ ಮಾತನಾಡಿದರು. ಮಾನಸಿಕ ಆರೋಗ್ಯ ದಿನದ ಕುರಿತು ಸಂಪನ್ಮೂಲ ವ್ಯಕ್ತಿ ಪಾರ್ವತಿ, ಮಾಹಿತಿ ನೀಡಿದರು. ಕೊಪ್ಪ ವಕೀಲರ ಸಂಘದ ಅಧ್ಯಕ್ಷ ಎಚ್.ಎನ್.ವಿಕ್ರಂ ನಿಗಳೆ, ಐಕ್ಯೂಎಸಿ ಸಂಚಾಲಕ ಎ.ಆರ್.ನಿರಂಜನ್, ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಭಾಷ, ಉಪನ್ಯಾಸಕ ಹರೀಶ್ ಮತ್ತಿತರರು ಇದ್ದರು.