ಆರೋಗ್ಯವೇ ನಮಗೆ ಸಂಪತ್ತು: ಹೊಸಮನಿ ಪುಂಡಲಿಕ

kaanunu ariu
Published on

ಮಡಿಕೇರಿ: ಆರೋಗ್ಯವೇ ನಮಗೆ ಒಂದು ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಂಡರೆ ಅದಕ್ಕಿಂತ ಸಂಪತ್ತು ಬೇರೊಂದಿಲ್ಲ. ಹಾಗಾಗಿ ನಾವು ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಉತ್ತಮ ಆರೋಗ್ಯ ಹೊಂದಿದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಮತ್ತು ಜಿಲ್ಲಾ ಆಯುಷ್ ಇಲಾಖೆ, ಮಡಿಕೇರಿ ಇವರ ಸಂಯುಕ್ತ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನಡೆದ ಆರೋಗ್ಯ ಮಾಹಿತಿ, ತಪಾಸಣಾ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಆಯುಷ್ ಇಲಾಖೆಯು ಸುಸ್ಸಜಿತ ಸವಲತ್ತು ಹೊಂದಿರುವ ಆಸ್ಪತ್ರೆಯಾಗಿದೆ. ಹಾಗೆಯೇ ನಮ್ಮ ವೈದ್ಯಕೀಯ ವ್ಯವಸ್ಥೆಯು ಬಹಳ ದೊಡ್ಡಮಟ್ಟದಲ್ಲಿ ಬೆಳೆದಿದೆ. ವಿದೇಶಿಜನರು ಹೆಚ್ಚಾಗಿ ಇದರ ಉಪಯೋಗ ಪಡೆದುಕೊಂಡು ಕಲಿತು ಇದರ ತರಬೇತಿಯನ್ನು ಪಡೆದು ಅವರ ದೇಶದಲ್ಲಿ ಮಾಹಿತಿ ನೀಡಿ ಅದರ ಆಸಕ್ತಿ ತೋರುತ್ತಿದ್ದಾರೆ. ವಿಪರ್ಯಾಸವೇನೆಂದರೆ ಭಾರತೀಯರಾದ ನಾವು ನಮ್ಮ ಪದ್ಧತಿಯನ್ನು ಪಡೆದುಕೊಳ್ಳದೆ ಇರುವುದು ಬೇಸರದ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.

ಆಯುರ್ವೇದ ಪಿತಾಮಹರಾದ ಚರಕ ಅವರು ತಂತ್ರಜ್ಞಾನ ವಿಲ್ಲದೆ ಆಗಿನ ಸಮಯದಲ್ಲಿ ಎಲ್ಲಾ ಖಾಯಿಲೆಗೆ ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು. ಎಂದರೆ, ನಮಗೆ ಬಹಳ ವಿಶೇಷ. ನಾವು ಹೆಚ್ಚಾಗಿ ಆಯುರ್ವೇದ ಚಿಕಿತ್ಸೆಯನ್ನು ಬಳಸಬೇಕು ಅದರ ಉಪಯೋಗಗಳನ್ನು ಪಡೆಯಬೇಕು. ನಾವು ಹೆಚ್ಚಾಗಿ ಆಯುರ್ವೇದ ಚಿಕಿತ್ಸೆಯನ್ನು ಬಳಸಬೇಕು ಅದರ ಉಪಯೋಗಗಳನ್ನು ಪಡೆಯಬೇಕು ಎಂದು ತಿಳಿಸಿದರು.

ಆಯುಷ್ ಇಲಾಖೆಯ ವತಿಯಿಂದ ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಖಾಯಿಲೆ ಪರೀಕ್ಷೆಗಳನ್ನು ನಡೆಸಲಾಯಿತು. ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಪ್ರಶಾಂತಿ, ೩ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಕೆ.ಬಸವರಾಜ್, ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಎನ್.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಎನ್.ಬಿ.ಜಯಲಕ್ಷ್ಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net