ಆರೋಗ್ಯವೇ ಶ್ರೇಷ್ಠ ಭಾಗ್ಯ

HLK UMESH
Published on

ಹೊಳಲ್ಕೆರೆ: ಹಣ, ಆಸ್ತಿ, ಅಧಿಕಾರ ಭಾಗ್ಯಗಳಿಗಿಂತ ಆರೋಗ್ಯವೇ ಶ್ರೇಷ್ಠ ಭಾಗ್ಯವಾಗಿದೆ. ಆರೋಗ್ಯ ವೃದ್ಧಿಯಿಂದ ದೇಶದ ಅಭಿವೃದ್ಧಿಯೂ ಸಾಧ್ಯ ಎಂದು ಶಿಕ್ಷಕ ಟಿ.ಪಿ.ಉಮೇಶ್ ಹೇಳಿದರು.

ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ-ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿ, ವೈಯುಕ್ತಿಕ ಸ್ವಚ್ಛತೆ ಜತೆಗೆ ಶಾಲೆ ಮತ್ತು ಮನೆಯ ಪರಿಸರದಲ್ಲೂ ನೈರ್ಮಲ್ಯ ಕಾಪಾಡಬೇಕು ಎಂದರು.

ಮನೆ ಕಸ, ಪ್ಲಾಸ್ಟಿಕ್ ತ್ಯಾಜ್ಯ, ಹಸಿಕಸ ಒಣಕಸ ರಾಸಾಯನಿಕ ಕಸಗಳನ್ನು ಸೂಕ್ತವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವ ಮೂಲಕ ನಮ್ಮ ಗ್ರಾಮವನ್ನು ಸ್ವಚ್ಛ ಗ್ರಾಮವಾಗಿ ಪರಿವರ್ತಿಸಬಹುದು. ಸ್ವಚ್ಛತೆಯಿಂದ ಜನರ ಆರೋಗ್ಯಮಟ್ಟ ಸುಧಾರಣೆಯಾಗಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಮುಖ್ಯಶಿಕ್ಷಕ ಡಿ.ಸಿದ್ದಪ್ಪ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖಂಚಂದ್ರಪ್ಪ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net