ಆರೋಗ್ಯ ಬಹಳ ಮುಖ್ಯ

h4-health camp
Published on

ಹುಬ್ಬಳ್ಳಿ: ತಾಲೂಕಿನ ಮಂಟೂರು ಗ್ರಾಮದಲ್ಲಿ ಆಯೋಜಿಸಿರುವ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನ ಎನ್‌ಎಸ್‌ಎಸ್ ಶಿಬಿರದಲ್ಲಿ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರ ಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಕೋಆಪರೇಟಿವ್ ಆಸ್ಪತ್ರೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಇತ್ತೀಚೆಗೆ ಜರುಗಿತು.
ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಸಂಭಾಜಿ ಉದ್ಘಾಟಿಸಿ ಮಾತನಾಡಿ, ಕೆಎಲ್‌ಇ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಈ ಶಿಬಿರವು ಜನರ ಆರೋಗ್ಯಕ್ಕೆ ಒತ್ತು ನೀಡಿದೆ. ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ. ಉಚಿತ ಶಿಬಿರಗಳಿಂದ ಬಡವರಿಗೆ ಆರೋಗ್ಯ ಭಾಗ್ಯ ಸಿಗಲಿದೆ ಎಂದರು.
ಪ್ರಾಚಾರ್ಯ ಡಾ.ಎಂ.ಜಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಿಗೆ ತಿಳಿಹೇಳಿದರು. ಪ್ರಾಚಾರ್ಯ ಪ್ರೊ. ವೀರೇಶ ಅಂಗಡಿ ಮಾತನಾಡಿದರು.
500ಕ್ಕಿಂತಲೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು. ಉಚಿತವಾಗಿ ಔಷಧ ವಿತರಿಸಲಾಯಿತು. ಆಸ್ಪತ್ರೆ ಆಡಳಿತಾಧಿಕಾರಿ ಡಾ.ವೈ.ಎಫ್. ಹಂಜಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net