ಆರೋಗ್ಯಯುತ ಜೀವನಕ್ಕೆ ಸಹಕಾರಿ

09 siraguppa 02
ಬಾಗೇವಾಡಿ ಗ್ರಾಮದ ಪಿಎಚ್‌ಸಿಯಲ್ಲಿ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮ ನಡೆಯಿತು. ಗ್ರಾಪಂ ಅಧ್ಯಕ್ಷೆ ತಾಯಮ್ಮ, ವೈದ್ಯಾಧಿಕಾರಿ ಡಾ.ವಿದ್ಯಾಶ್ರೀ, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಕಾಸಿಂ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜಶೇಖರಯ್ಯ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಸರೋಜಾ, ಸಮುದಾಯ ಆರೋಗ್ಯ ಅಧಿಕಾರಿ ಗೌರಮ್ಮ ಇದ್ದರು.
Published on

ಸಿರಗುಪ್ಪ: ಮಕ್ಕಳಿಗೆ ಇಂದ್ರಧನುಷ್ ಲಸಿಕೆ ಹಾಕಿಸುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುವುದರ ಜತೆಗೆ ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ.ವಿದ್ಯಾಶ್ರೀ ಹೇಳಿದರು.

ಬಾಗೇವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಾಲಕರು ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು. ನಮ್ಮ ವ್ಯಾಪ್ತಿಯಲ್ಲಿ 316 ಮಕ್ಕಳು ಮತ್ತು 71 ಗರ್ಭಿಣಿಯರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಕಾಸಿಂ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜಶೇಖರಯ್ಯ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಸರೋಜಾ, ಸಮುದಾಯ ಆರೋಗ್ಯ ಅಧಿಕಾರಿ ಗೌರಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net