ಗುಣಮಟ್ಟದ ಸೇವೆಗೆ ಸರ್ಕಾರ ಬದ್ಧ

dj hyr health camp
Published on

ಹಿರಿಯೂರು: ರಾಜ್ಯದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಯೋಜನೆ, ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ನೆಹರು ಮೈದಾನದಲ್ಲಿ ಬುಧವಾರ ಜಿಪಂ, ತಾಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೆಂಪೇಗೌಡ ಪತ್ತಿನ ಸಹಕಾರ ಸಂಘ,

ರೋಟರಿ, ಲಯನ್ಸ್ ಕ್ಲಬ್, ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಸ್ಥ ಸಮಾಜ ನಿರ್ಮಾಣ ಉದ್ದೇಶದಿಂದ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಅಗತ್ಯ ಅನುದಾನ ನೀಡಲಾಗುವುದು. ಆರೋಗ್ಯ ಸಮಸ್ಯೆಗಳನ್ನು ಮೂಲದಲ್ಲಿಯೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡುವುದು ಮೇಳದ ಉದ್ದೇಶವಾಗಿದೆ.

ಜನರು ಇಂತಹ ಯೋಜನೆಯ ಪ್ರಯೋಜನ ಪಡೆದುಕೊಂಡು ಆರೋಗ್ಯಕರ ಕುಟುಂಬ, ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದರು.

ಆರೋಗ್ಯ ಇಲಾಖೆ ನಿಂತ ನೀರಾಗಬಾರದು. ಚಲನಶೀಲವಾಗಿರಬೇಕು. ಸರ್ಕಾರದಿಂದ ಬರುವ ಆರೋಗ್ಯ ಸೇವೆಗಳನ್ನು ಬಡ ಜನರಿಗೆ ತಲುಪಿಸುವ ಕೆಲಸವಾಗಬೇಕು.

ಈ ನಿಟ್ಟಿನಲ್ಲಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಅಭೂತಪೂರ್ವ ಯಶಸ್ಸು: ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಆರೋಗ್ಯ ಮೇಳ ನಡೆಯಿತು. ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ 3969 ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಟಿಎಚ್‌ಒ ಡಾ.ವೆಂಕಟೇಶ್,

ಕೆ.ಜಗದೀಶ್ ಕಂದಿಕೆರೆ, ಜಿಪಂ.ಮಾಜಿ ಸದಸ್ಯ ಆರ್.ನಾಗೇಂದ್ರನಾಯ್ಕ, ಮಹಮ್ಮದ್ ಫಕ್ರುದ್ದೀನ್, ಅಶೋಕ್, ಪೌರಾಯುಕ್ತ ಮಹಾಂತೇಶ್, ಮಾಜಿ ಅಧ್ಯಕ್ಷೆ ಗೀತಾ, ಈರಲಿಂಗೇಗೌಡ, ಸುರೇಶ್ ಬಾಬು, ಗುರುಪ್ರಸಾದ್, ಗಿರೀಶ್, ಸಾದತ್ ಉಲ್ಲಾ, ಕಲ್ಲಹಟ್ಟಿ ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net