

ಹುಬ್ಬಳ್ಳಿ: ಇಲ್ಲಿಯ ನವನಗರದಲ್ಲಿರುವ ಕರ್ನಾಟಕ ಕ್ಯಾನ್ಸರ್ ಥೆರಪಿ ಹಾಗೂ ರೀಸರ್ಚ್ ಇನ್ ಸ್ಟಿಟ್ಯೂಟ್ ಗೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು.
ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇರುವ ಸೌಲಭ್ಯಗಳು, ಚಿಕಿತ್ಸಾ ವಿಧಾನ ಮುಂತಾದವುಗಳನ್ನು ವೀಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಲು ಸಿದ್ಧ ಎಂದರು.
ಡಾ. ಬಿ.ಆರ್. ಪಾಟೀಲ, ಶಾಸಕ ಪ್ರಸಾದ ಅಬ್ಬಯ್ಯ, ಮಹೇಂದ್ರ ಸಿಂಘಿ, ಸದಾನಂದ ಡಂಗನವರ, ಬಸವರಾಜ ಕಿತ್ತೂರ, ಡಾ. ವಿಲಾಸ ಇತರರು ಇದ್ದರು.