ಆಧುನಿಕ ಜೀವನ ಶೈಲಿಯಿಂದ ಆರೋಗ್ಯ ಸಮಸ್ಯೆ

ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಶಿಶುಪಾಲನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ನಟರಾಜ ಉದ್ಘಾಟಿಸಿದರು. ಸಿಡಿಪಿಒ ಬೆಟದೇಶ ಮಾಳೆಕೊಪ್ಪ, ಗ್ರಾಪಂ ಅಧ್ಯಕ್ಷೆ ಅಂದಮ್ಮ ಬಳಿಗಾರ, ಅಂಗನವಾಡಿ ಮೇಲ್ವಿಚಾರಕಿಯರಾದ ಜಯಲಕ್ಷ್ಮೀ ಮೆಣಸಿನಕಾಯಿ, ಇತರರಿದ್ದರು.

Published on

ಯಲಬುರ್ಗಾ: ಆಧುನಿಕ ಜೀವನ ಶೈಲಿ ಹಾಗೂ ಆಹಾರ ಕ್ರಮದಿಂದ ಹಲವರು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಸುಧಾರಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ನಟರಾಜ ಹೇಳಿದರು.

ತಾಲೂಕಿನ ಬೇವೂರು ಗ್ರಾಮದ ಶಿಶುಪಾಲನಾ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿ ಬಗ್ಗೆ ಸಂಬಂಧಿಸಿದ ಇಲಾಖೆಗಳಿಂದ ಅರಿವು ಮೂಡಿಸಿದರೂ ನಿರೀಕ್ಷಿತ ಬದಲಾವಣೆ ಆಗದಿರುವುದು ವಿಷಾದನೀಯ ಎಂದರು.

ಸಿಡಿಪಿಒ ಬೆಟದೇಶ ಮಾಳೆಕೊಪ್ಪ ಮಾತನಾಡಿ, ಪೌಷ್ಟಿಕ ಕರ್ನಾಟಕ ನಿರ್ಮಿಸುವ ಸಂಕಲ್ಪದೊಂದಿಗೆ ಪೋಷಣ ಅಭಿಯಾನ ರೂಪಿಸಲಾಗಿದೆ. ಭಾರತವನ್ನು ಕಾಡುತ್ತಿರುವ ಅಪೌಷ್ಟಿಕತೆ ತೊಡೆದು ಹಾಕಲು 5 ಗುರಿ ಹೊಂದಿದ್ದು, ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರಲ್ಲಿ ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವ ಸಮಸ್ಯೆ ನಿವಾರಿಸಲು ಈ ಯೋಜನೆ ಆರಂಭಿಸಲಾಗಿತ್ತು. 2025ನೇ ಸಾಲಿನಲ್ಲಿ ಹಲವು ಅಂಶಗಳಿಂದ ಅರಿವು ಮೂಡಿಸಲಾಗುತ್ತಿದೆ ಎಂದರು. ಗರ್ಭಿಣಿ, ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗ್ರಾಪಂ ಅಧ್ಯಕ್ಷೆ ಅಂದಮ್ಮ ಬಳಿಗಾರ, ಸಿಎಚ್‌ಒ ಮಂಜುಳಾ ಹೊಸಳ್ಳಿ, ಅಂಗನವಾಡಿ ಮೇಲ್ವಿಚಾರಕಿಯರಾದ ಜಯಲಕ್ಷ್ಮೀ ಮೆಣಸಿನಕಾಯಿ, ಚನ್ನಮ್ಮ ಶಾನುಭೋಗರ, ಲಲಿತಾ ನಾಯ್ಕರ, ಮಾಧವಿ ವೈದ್ಯ, ಪದ್ಮಾವತಿ, ಮಂಜುಳಾ ಗುಗ್ಗರಿ, ಶಿವಪುತ್ರಮ್ಮ ಅಂಗಡಿ, ಗಿರೀಜಾ ಕಡಿವಾಲರ, ಪ್ರೇಮಲತಾ ಗುಡಸಲದ, ಜಯಶ್ರೀ ಕುದರಿ, ಪದ್ಮಾವತಿ ದಾಸರ, ಸುಮಾ ಕರಿಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net