ದುಶ್ಚಟದ ದಾಸರಾದರೆ ಬದುಕು ವಿನಾಶ : ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಪಾದನೆ

New Project (24)
Published on

ಕಡಬ: ಸಹವಾಸ ದೋಷ, ಕ್ಷಣಿಕ ಆಕರ್ಷಣೆಗಳ ಕಾರಣ ದುಶ್ಚಟದ ದಾಸರಾದರೆ ಬದುಕು ವಿನಾಶ ನಿಶ್ಚಿತ. ಇದರಿಂದ ವೈಯಕ್ತಿಕ ಜೀವನದ ಜತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಘಟಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಘಟಕ ವತಿಯಿಂದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕಡಬ ತಾಲೂಕುಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಸ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಆನಂದ ಸುವರ್ಣ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಂಚಾಲಕ ಜಯಸೂರ್ಯ ರೈ, ಸವಣೂರು ಗ್ರಾಮ ಪಂಚಾಯಿತಿ ಸದಸ್ಯ ಗಿರಿಶಂಕರ ಸುಲಾಯ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಆಂಗ್ಲ ಮಾಧ್ಯಮ ಮುಖ್ಯ ಶಿಕ್ಷಕ ನಾರಾಯಣ ಭಟ್, ಕನ್ನಡ ಮಾಧ್ಯಮ ಮುಖ್ಯಗುರು ವಿನಯ ವಿ.ಶೆಟ್ಟಿ ಉಪಸ್ಥಿತರಿದ್ದರು.

ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಮಹೇಶ್ ಕೆ.ಸವಣೂರು ಪ್ರಸ್ತಾವಿಸಿದರು. ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಅಶೋಕ್ ಕುಮಾರ್, ಸೌಮ್ಯಾ ನಿರೂಪಿಸಿದರು. ವಲಯ ಮೇಲ್ವಿಚಾರಕಿ ವೀಣಾ ಕೆ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net