ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

swasthya
ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ನಡೆಯಿತು
Published on

ಹೆಬ್ರಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುದ್ರಾಡಿಯಲ್ಲಿ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಜನಜಾಗೃತಿ ಸಮಿತಿ ಸದಸ್ಯ ರತ್ನಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಮಕ್ಕಳ ಪಾತ್ರದ ಬಗ್ಗೆ ಸೀತಾರಾಮ್ ಹೆಬ್ಬಾರ್ ಮಾಹಿತಿ ನೀಡಿದರು. ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಮಂಜುನಾಥ ಪೂಜಾರಿ, ಮುದ್ರಾಡಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಇಂದಿರಾಬಾಯರಿ ಉಪಸ್ಥಿತರಿದ್ದರು. ಮೇಲ್ವಿಚಾರಕಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಮಮತಾ ಸ್ವಾಗತಿಸಿದರು. ಸೇವಾಪ್ರತಿನಿಧಿ ವನಿತಾ ಸಹಕರಿಸಿದರು. ಶಿಕ್ಷಕ ಆನಂದ ಸಾಲಿಗ್ರಾಮ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net