ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

07ALD11
ಅಳವಂಡಿ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂೆ ಹಾಗೂ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಆರೋಗ್ಯ ನೀರಿಕ್ಷಣಾಧಿಕಾರಿ ರವೀಂದ್ರ ಕಮ್ಮಾರ ಮಾತನಾಡಿದರು. ಪ್ರಾಚಾರ್ಯ ಚಂದ್ರಶೇಖರ, ಉಪನ್ಯಾಸಕರಾದ ಎಚ್.ಮಹಾನಂದಿ, ಸಿದ್ದು ಅಂಗಡಿ, ನವೀನ ಇನಾಮದಾರ ಇದ್ದರು.
Published on

ಅಳವಂಡಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಎಲ್ಲರೂ ಸಹಕರಿಸಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ಕಮ್ಮಾರ ತಿಳಿಸಿದರು.

ಗ್ರಾಮದ ಶ್ರೀ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ರಾಷ್ಟ್ರೀಯ ಡೆಂೆ ಹಾಗೂ ಮಲೇರಿಯಾ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು.

ಮನೆಯಲ್ಲಿನ ಸಂಗ್ರಹಿಸಿದ ನೀರನ್ನು ಮುಚ್ಚಿಡಬೇಕು. ಸೊಳ್ಳೆ ಕಡಿತ ಚಿಕ್ಕದು. ಕಂಟಕ ಮಾತ್ರ ದೊಡ್ಡದು. ಹಾಗಾಗಿ ಮಲಗುವಾಗ ಪರದೆ ಬಳಸಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ. ಶೂನ್ಯ ಮಲೇರಿಯಾ ಗುರಿ ತಲುಪಲು ಪ್ರತಿಯೊಬ್ಬರು ಸಹಕರಿಸಬೇಕು ಎಂದರು.

ಪ್ರಾಚಾರ್ಯ ಚಂದ್ರಶೇಖರ ದೊಡ್ಡಮನಿ ಮಾತನಾಡಿದರು. ಉಪನ್ಯಾಸಕರಾದ ಎಚ್.ಮಹಾನಂದಿ, ಸಿದ್ದು ಅಂಗಡಿ, ನವೀನ ಇನಾಮದಾರ, ಆಶಾ ಕಾರ್ಯಕರ್ತೆಯರಾದ ಶಕುಂತಲಾ, ಪಕೀರಮ್ಮ, ರಾಧಾಬಾಯಿ, ಜಾನಕಿ, ಮಹಾದೇವಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net