

ಮಂಗಳೂರು : ದ.ಕ.ಜಿಲ್ಲೆಯಲ್ಲಿ 6ನೇ ಸುತ್ತಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಆರಂಭವಾಗಿದೆ. ಸಂಶೋಧಕರು ಒಂದು ತಿಂಗಳ ಅವಧಿಯವರೆಗೆ ಜಿಲ್ಲೆಯ 44 ಗ್ರಾಮಗಳಿಗೆ ಭೇಟಿ ನೀಡಿ ಆಯ್ದ ಕುಟುಂಬಗಳ ಸಮೀಕ್ಷಾ ಕಾರ್ಯ ನಡೆಸಲಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ/ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ದೂರವಾಣಿ ಸಂಖ್ಯೆ: 0824-2423672 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
.......................