ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಅವಶ್ಯ

22ALD02
ಅಳವಂಡಿಯಲ್ಲಿ ನಡೆದ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ಶ್ರೀಮರುಳಾರಾದ್ಯ ಶಿವಾಚಾರ್ಯ ಸ್ವಾಮಿಗಳು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಸಿಡಿಪಿಓ ರೂಪಾ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ಉಪಾಧ್ಯಕ್ಷೆ ಶಾರಮ್ಮ ಇದ್ದರು.
Published on

ಅಳವಂಡಿ: ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಆರೋಗ್ಯವಾಗಿರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವಾಗಿರಬೇಕು ಎಂದು ಸಿಡಿಪಿಓ ರೂಪಾ ತಿಳಿಸಿದರು.

ಗ್ರಾಮದ ಶ್ರೀಸಿದ್ದೇಶ್ವರ ಸಮುದಾಯ ಭವನದಲ್ಲಿ ನಡೆದ ರಾಷ್ಟ್ರೀಯ ಪೋಷಣಾ ಅಭಿಯಾನದಡಿ ನಡೆದ ಪೋಷಣಾ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.

ಮಹಿಳೆಯರು, ಗರ್ಭಿಣಿಯರು ಹಸಿರು ತರಕಾರಿ, ಮೊಳೆಕೆಯೊಡೆದ ಕಾಳು, ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕು. ಆರೋಗ್ಯ ರಕ್ಷಣೆ ಹಾಗೂ ಬೆಳವಣಿಗೆಗೆ ಸಮತೋಲನ ಆಹಾರ ಸೇವನೆ ಅತ್ಯಂತ ಮುಖ್ಯ ಎಂದರು.

ಶ್ರೀಮರುಳಾರಾದ್ಯ ಶಿವಾಚಾರ್ಯ ಸ್ವಾಮಿಗಳು, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ಉಪಾಧ್ಯಕ್ಷೆ ಶಾರಮ್ಮ ಇಳಿಗೇರ, ಪ್ರಮುಖರಾದ ಗುರುಬಸವರಾಜ ಹಳ್ಳಿಕೇರಿ, ಶಶಿಕಲಾ ನಾಗರಳ್ಳಿ, ಚಂದನಾ, ದೇವೆಂದ್ರರಡ್ಡಿ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net