

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗಾಗಿ ತಾಲೂಕುಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮರ್ದಾಳ ಸೇಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆಯಿತು.
ಮರ್ದಾಳ ಸೇಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಈಶೋ ಫಿಲೀಫ್ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಜೀವನ ನಡೆಸುವುದರ ಜತೆಗೆ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು ಮಾತನಾಡಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸಂತೋಷ್ ಕೆ. ಅಧ್ಯಕ್ಷತೆ ವಹಿಸಿದ್ದರು. ಸೇವಾಪ್ರತಿನಿಧಿಗಳಾದ ಜ್ಞಾನ ಸೆಲ್ವಿ, ದಿನೇಶ್ ಉಪಸ್ಥಿತರಿದ್ದರು. ಶಿಕ್ಷಕಿ ಫಿಲೋಮಿನಾ ಸ್ವಾಗತಿಸಿದರು. ಸೇವಾಪ್ರತಿನಿಧಿ ವಿನೋದ್ ಕೆ.ಸಿ. ವಂದಿಸಿದರು. ಶಿಕ್ಷಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.