ಆರೋಗ್ಯಕರ ಸಮಾಜ ಕಟ್ಟಲು ಎನ್‌ಎಸ್‌ಎಸ್ ಪೂರಕ

21blh2 kle college news
Published on

ಬೈಲಹೊಂಗಲ: ಸಂಸ್ಕಾರವಂತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆಯಾಗಿದೆ ಎಂದು ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹೇಳಿದರು.

ತಾಲೂಕಿನ ನಯಾನಗರ ಗ್ರಾಮದಲ್ಲಿ ಪಟ್ಟಣದ ಕೆ.ಎಲ್.ಇ. ಸಂಸ್ಥೆಯ ಡಿಪ್ಲೊಮಾ ಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೇಜುಗಳಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕ, ವ್ಯಕ್ತಿಗತವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ನಯಾನಗರದ ಅಭಿನವ ಸಿದ್ಧಲಿಂಗ ಮಹಾಸ್ವಾಮಿಜಿ ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯೆ ಡಾ.ನಿರ್ಮಲಾ ಬಟ್ಟಲ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯನ್ನು ವೇದಿಕೆಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಪ್ರಾಚಾರ್ಯ ಪ್ರೊ. ಶ್ರೀಧರ ನಿರಡಿ ಪ್ರಾಸ್ತಾವಿಕ ಮಾತನಾಡಿದರು.

ಗಂಗಯ್ಯ ಹಿರೇಮಠ, ದೇಮನಗೌಡ ಹುಲ್ಲೆಪ್ಪನವರ, ನಾರಾಯಣ ನಲವಡೆ, ಸುನೀಲ ಪಾಟೀಲ, ನಾಗೇಶ ಮಾಳನ್ನವರ ಕೆ.ಎಲ್.ಇ. ಪಾಲಿಟೆಕ್ನಿಕ್ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net