ಕಣ್ಣಿನ ಸಮಸ್ಯೆ ಇದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ

Untitled design (9)
ಒರ್ವಾಯಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನ ತರಬೇತಿ ಕಾರ್ಯಕ್ರಮದಲ್ಲಿ ಡಾ. ಗುರುಬಸವರಾಜ ಮಾತನಾಡಿದರು. ವೈದಾಧಿಕಾರಿ ಲಕ್ಷ್ಮಣ್ ನಾಯಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಘವಶೆಟ್ಟಿ ಇದ್ದರು.
Published on

ಕುರುಗೋಡು: ನವಜಾತು ಶಿಶುಗಳಲ್ಲಿ ಶ್ರವಣದೋಷ ಕಂಡು ಬಂದಲ್ಲಿ ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಾ. ಗುರುಬಸವರಾಜ ಹೇಳಿದರು.

ರೋಗವನ್ನು ಆರಂಭದಲ್ಲಿ ಗುರುತಿಸಿ

ಒರ್ವಾಯಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಟ್ಟಿದ ಮಗುವಿನಿಂದ ವಯಸ್ಸಾದವರಿಗೂ ಕೂಡ ಶ್ರವಣದೋಷದಿಂದ ಬಳಲುತ್ತಾರೆ. ಕಾರ್ಯಕರ್ತೆಯರು ಮನೆಗೆ ಭೇಟಿ ಸಂದರ್ಭದಲ್ಲಿ ನವಜಾತ ಶಿಶು ಹಾಗೂ ಕುಟುಂಬದ ಸದಸ್ಯರಿಗೆ ಕಣ್ಣಿನ ನ್ಯೂನತೆ ಕಂಡು ಬಂದಲ್ಲಿ ಉಚಿತ ತಪಾಸಣಾ ಶಿಬಿರಕ್ಕೆ ಕಳುಹಿಸಿ ಕೊಡಬೇಕು. ರೋಗವನ್ನು ಆರಂಭದಲ್ಲಿ ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಗುಣಮುಖರಾಗುವ ಅವಕಾಶ ಹೆಚ್ಚಾಗಿರುತ್ತದೆ ಎಂದು ತಿಳಿಸಿದರು.

ಕಿವಿಯ ವಿವಿಧ ರೀತಿಯ ತೊಂದರೆಗಳನ್ನು ಚಿತ್ರ ತೋರಿಸುವ ಮೂಲಕ ಮಾಹಿತಿ ನೀಡಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಲಕ್ಷ್ಮಣ್ ನಾಯಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಘವಶೆಟ್ಟಿ ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net