ಶಾಲೆಯಲ್ಲಿ ಹೃದಯಾಘಾತವಾಗಿ ಶಿಕ್ಷಕ ಸಾವು

27Kagawad3
Published on

ಕಾಗವಾಡ: ಶಾಲೆಗೆ ಪಾಠ ಮಾಡಲು ಬಂದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್‌ಎಂಕೆಪಿಎಸ್ ಪ್ರೌಢಶಾಲೆಯಲ್ಲಿ ಗುರುವಾರ ನಡೆದಿದೆ.

ಭರತ ಶಿಂಧೆ (47) ಮೃತ ಶಿಕ್ಷಕ. ಮೂಲತಃ ರಾಯಬಾಗ ತಾಲೂಕಿನ ಬಿರಡಿ ಗ್ರಾಮದವರು. ಮಂಗಸೂಳಿ ಸರ್ಕಾರಿ ಶಾಲೆಯಲ್ಲಿ ಸಮಾಜ-ವಿಜ್ಞಾನ ವಿಷಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗ್ಗೆ ಶಾಲಾ ಆವರಣಕ್ಕೆ ಬರುತ್ತಲೇ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೊದಲು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಮುಂಬಡ್ತಿ ಪಡೆದು ಪ್ರೌಢಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net