ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತ; ಜಿಲ್ಲಾ ಖಜಾನೆ ಅಧಿಕಾರಿ ನಿಧನ

5 Dwd 1 Jayaprakash Kalakoti
Published on

ಧಾರವಾಡ: ಬಡ್ತಿ ಪಡೆದು ಅಧಿಕಾರ ಸ್ವೀಕರಿಸಿದ ದಿನವೇ ಖಜಾನೆ ಅಧಿಕಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಯಪ್ರಕಾಶ ಕಲಕೋಟಿ ಮೃತ ಅಧಿಕಾರಿ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಖಜಾನೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ ಅವರು ಇತ್ತೀಚೆಗೆ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕರಾಗಿ ಮುಂಬಡ್ತಿ ಪಡೆದಿದ್ದರು.
ಖಜಾನೆ ಇಲಾಖೆಯ ಧಾರವಾಡ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ೧೦.೩೦ಕ್ಕೆ ಅಧಿವಹಿಸಿಕೊಂಡಿದ್ದರು. ಈ ವೇಳೆ ತೀವ್ರ ಹೃದಯಯಾಘಾತವಾಗಿ ಕುಸಿದು ಬಿದ್ದಿದ್ದರು. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net