ಇಸಿಜಿ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ವ್ಯಕ್ತಿ ನಿಧನ

PTR_23 AUG_3
Published on

ಪುತ್ತೂರು: ಎದೆನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಇಸಿಜಿ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ.

ಸಂಪ್ಯ ಮೇರ್ಲ ಸಮೀಪದ ಕಂಬಳತ್ತಡ್ಡ ನಿವಾಸಿ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ (೪೭) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ಬೆಳಿಗ್ಗೆ ಹೃದಯದ ಬಳಿ ನೋವು ಬಂದ್ದಿದ್ದು, ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಸಿಜಿ ಮಾಡುತ್ತಿದ್ದ ಸಂದರ್ಭ ಏಕಾಏಕಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಪಂಜಳ ಕಲ್ಲುಗುಡ್ಡೆಯ ಸಾತಿ ಬಾರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪುತ್ತೂರು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು ಹಲವು ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net