ಹೃದಯಾಘಾತದಿಂದ ಕೈದಿ ಸಾವು

hindalga jail
Published on

ಬೆಳಗಾವಿ: ನಗರದ ಹಿಂಡಲಗಾ ಕಾರಾಗೃಹದಲ್ಲಿ ಕೈದಿಯೊಬ್ಬ ಸೋಮವಾರ ಜಿಲ್ಲಾಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಪ್ರಕರಣ ಎಪಿಎಂಸಿ ಠಾಣೆಯಲ್ಲಿ ದಾಖಲಾಗಿದೆ. ಹಾಸನ ಜಿಲ್ಲೆಯ ರಾಜಪ್ಪ ಹನುಮಂತ ಕಂದಳ್ಳಿ (66) ಮೃತ ಕೈದಿ.

ಜೀವಾವಧಿ ಶಿಕ್ಷೆಗೆ ಒಳಗಾಗಿ 2005ರಲ್ಲಿ ಹಿಂಡಲಗಾ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net