ಗ್ರಾಮೀಣ ಜನರಿಗೆ ಆರೋಗ್ಯ ಸೌಲಭ್ಯ : ವಾಮನ ಕೋಟ್ಯಾನ್ ಹೇಳಕೆ

New Project (36)
Published on

ಮೂಲ್ಕಿ: ಗ್ರಾಮೀಣ ಪ್ರದೇಶದ ಜನರಿಗೆ ನಗರದ ಆರೋಗ್ಯ ಸೌಲಭ್ಯ ನೀಡಿ ರಕ್ಷಿಸುವ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ ಎಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ಹೇಳಿದರು.

ಮೂಲ್ಕಿ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಾಗೂ ರಕ್ತದಲ್ಲಿ ಸಕ್ಕರೆ ಅಂಶ ಪತ್ತೆ ಹಚ್ಚುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಜ ಶೆಟ್ಟಿ ಜಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಮುಕ್ಕ ಶ್ರೀನಿವಾಸ ಆಸ್ಪತ್ರೆ ವೈದ್ಯ ಡಾ.ಸುಬ್ರಹ್ಮಣ್ಯಮ್, ಪತಂಜಲಿ ಫುಡ್ಸ್‌ನ ಪ್ರಬಂಧಕ ಅರುಣ್ ಶರ್ಮಾ, ನಿವೃತ್ತ ಪ್ರಾಂಶುಪಾಲ ವೈ ಎನ್.ಸಾಲ್ಯಾನ್, ಶೀತಲ್ ಸುಶೀಲ್, ಜಯ ಕುಮಾರ್ ಕುಬೆವೂರು, ಸುಶೀಲ್ ಬಂಗೇರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net