ಹೃದಯಾಘಾತದಿಂದ ಕಾಲೇಜು ವಿದ್ಯಾರ್ಥಿನಿ ಸಾವು

death
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿ ಪಿಯು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿ ಶ್ರೇಯಾ ಪಕ್ಕಳ ಮೃತ ದುರ್ದೈವಿ. ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಈಕೆ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಳು. ಇದನ್ನೂ ಓದಿರಿ ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಸೋಮವಾರ ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೇಯಾಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶ್ರೇಯಾ ಮೃತಪಟ್ಟಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net