ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಗಂಟಿಹೊಳೆ ಅಭಿನಂದನೆ

Gururaj gantihole
ಶಾಸಕ ಗುರುರಾಜ್ ಗಂಟಿಹೊಳೆ ಅಭಿನಂದನೆ
Published on

ಬೈಂದೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪಾಲಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಅಭಿನಂದನಾರ್ಹರು. ಈ ಸಾಧನೆ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸಾಬೀತಾಗಿದೆ. ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಾಗಲಿ ಮತ್ತು ಅನುತ್ತೀರ್ಣರಾದವರು ಎದೆಗುಂದದೆ ಮುಂದಿನ ಅವಕಾಶ ಸದುಪಯೋಗ ಮಾಡಬೇಕು ಎಂದು ಹೇಳಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net