

ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ > ಸಾರ್ವಜನಿಕರು ಮಧ್ಯಾಹ್ನ ಅನಗತ್ಯ ಓಡಾಡಬಾರದು
ವಿಜಯವಾಣಿ ಸುದ್ದಿಜಾಲ ಕಲಬುರಗಿ
ದಿನಗಳೆದಂತೆ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಜನಸಂದಣಿ, ಮಾರುಕಟ್ಟೆ, ಕೈಗಾರಿಕೆ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಮದುವೆ, ಜಾತ್ರೆ, ಜಯಂತಿ, ಹಬ್ಬ ಹರಿದಿನಗಳಿವೆ. ಚುನಾವಣೆ ಪ್ರಚಾರವೂ ನಡೆಯುತ್ತಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರು, ಶಾಮಿಯಾನ ವ್ಯವಸ್ಥೆ ಮಾಡಲು ಆಯೋಜಕರಿಗೆ ಸೂಚಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಿಸಿಲಿನಿಂದ ಬಸವಳಿದು ಆಸ್ಪತ್ರೆಗೆ ಬರುವ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು. ಜಿಮ್ಸ್ ಆಸ್ಪತ್ರೆಯಲ್ಲಿ ೬ ಬೆಡ್, ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ೨-೩ ಬೆಡ್ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂದೆರಡು ಹಾಸಿಗೆ ಹೀಟ್ ಸ್ಟೊçÃಕ್ ರೋಗಿಗಳಿಗೆ ಮೀಸಲಿಡಬೇಕು ಎಂದರು.
ಟ್ರಾಫಿಕ್ ಸಿಗ್ನಲ್ ಬೇಡ: ಕಲಬುರಗಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಕಡಿಮೆ ಆಗುವವರೆಗೆ ನಗರದ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮಧ್ಯಾಹ್ನ ೧೨ರಿಂದ ಸಂಜೆ ೪ರವರೆಗೆ ತೆಗೆದು ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಸಾರ್ವಜನಿಕರು ಮಧ್ಯಾಹ್ನ ಅನಗತ್ಯ ಓಡಾಡಬಾರದು ಎಂದು ಸಲಹೆ ನೀಡಬೇಕು ಎಂದು ಹೆಚ್ಚುವರಿ ಎಸ್‌ಪಿ ಶ್ರೀನಿಧಿ ಅವರಿಗೆ ಸೂಚಿಸಿದರು.
ಪಾಲಿಕೆ ಆಯುಕ್ತ ಭುವನೇಶ ಪಾಟೀಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಆರ್‌ಸಿಎಚ್‌ಒ ಡಾ.ಶರಣಬಸಪ್ಪ ಕ್ಯಾತನಾಳ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ ಪಾಟೀಲ್, ಸಿಸಿಟಿ ಕಾರ್ಯಕ್ರಮ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಡಾ.ಚಂದ್ರಕಾAತ ನರಿಬೋಳ, ಡಾ.ಗುಳಗಿ, ಡಾ.ರಾಜಕುಮಾರ ಇತರರಿದ್ದರು.
ನರೇಗಾ ಸ್ಥಳಕ್ಕೆ ಮಕ್ಕಳನ್ನು ಕರೆತರಬೇಡಿ
ಜಿಲ್ಲೆಯಲ್ಲಿ ಬಿರು ಬಿಸಿಲು ಮತ್ತು ಬರ ಇದೆ. ಗ್ರಾಮೀಣ ಭಾಗದ ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆಂದೇ ಇಲಾಖೆ ಕೂಸಿನ ಮನೆ ಆರಂಭಿಸಿದೆ. ಮಹಿಳೆಯರು ಮಕ್ಕಳನ್ನು ಕೇಂದ್ರದಲ್ಲಿ ಬಿಡಬೇಕು. ಬಿಸಿಲು ತಾಪ ಹೆಚ್ಚಾಗಿದ್ದರಿಂದ ನರೇಗಾ ಸೈಟ್‌ಗೆ ಮಕ್ಕಳನ್ನು ಕರೆತರಬಾರದು. ಕಾರ್ಮಿಕರ ಕೆಲಸದ ಅವಧಿಯನ್ನು ಬೆಳಗ್ಗೆ ೭ರಿಂದ ಮಧ್ಯಾಹ್ನ ೧೨ರವರೆಗೆ ನಿಗದಿಪಡಿಸಿ ನೀರು, ಶಾಮಿಯಾನ, ಓಆರ್‌ಎಸ್ ಪ್ಯಾಕೆಟ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.