ಬಿಸಿಲ ತಾಪ ಹೆಚ್ಚಳ ಮುನ್ನೆಚ್ಚರಿಕೆ ವಹಿಸಿ

Heat Stroke Management Meeting (4) (1)
Published on

ಕಲಬುರಗಿ: ಬಿಸಿಲಿನ ತಾಪ ಹೆಚ್ಚುತ್ತಿದ್ದು, ಜನಸಂದಣಿ, ಮಾರುಕಟ್ಟೆ, ಕೈಗಾರಿಕೆ, ಕಟ್ಟಡ ನಿರ್ಮಾಣದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಹೀಟ್ ಸ್ಟ್ರೋಕ್ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಬೇಸಿಗೆಯಲ್ಲಿ ಮದುವೆ, ಜಾತ್ರೆ, ಜಯಂತಿ, ಹಬ್ಬ ಹರಿದಿನಗಳು ಇವೆ. ಚುನಾವಣೆ ಪ್ರಚಾರವೂ ನಡೆಯುತ್ತಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರು, ಶಾಮಿಯಾನದ ವ್ಯವಸ್ಥೆ ಮಾಡಲು ಆಯೋಜಕರಿಗೆ ಸೂಚಿಸಬೇಕು ಎಂದು ತಿಳಿಸಿದರು.
ಬಿಸಿಲಿನಿಂದ ಆಸ್ಪತ್ರೆಗೆ ಬರುವ ರೋಗಿಗೆ ತುರ್ತು ಚಿಕಿತ್ಸೆ ನೀಡಬೇಕು. ಜಿಮ್ಸ್ ಆಸ್ಪತ್ರೆಯಲ್ಲಿ ೬ ಬೆಡ್, ಪ್ರತಿ ತಾಲೂಕಾ ಆಸ್ಪತ್ರೆಯಲ್ಲಿ ೨-೩ ಬೆಡ್ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂದೆರಡು ಹಾಸಿಗೆ ಹೀಟ್ ಸ್ಟ್ರೋಕ್ ರೋಗಿಗಳಿಗೆ ಮೀಸಲಿಡಬೇಕು ಎಂದರು.
ಟ್ರಾಫಿಕ್ ಸಿಗ್ನಲ್ ಬೇಡ: ಕಲಬುರಗಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಕಡಿಮೆ ಆಗುವವರೆಗೆ ನಗರದಲ್ಲಿನ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮಧ್ಯಾಹ್ನ ೧೨ರಿಂದ ಸಂಜೆ ೪ ಗಂಟೆವರೆಗೆ ತೆಗೆದು ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಸಾರ್ವಜನಿಕರು ಮಧ್ಯಾಹ್ನ ಅನಗತ್ಯ ಓಡಾಡ ಮಾಡಬಾರದು ಎಂದು ಸಲಹೆ ನೀಡಬೇಕು ಎಂದು ಹೆಚ್ಚುವರಿ ಎಸ್.ಪಿ.ಶ್ರೀನಿಧಿ ಅವರಿಗೆ ಸೂಚಿಸಿದರು.
ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ದೇವಿದಾಸ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಆರ್‌ಸಿಎಚ್‌ಓ ಡಾ.ಶರಣಬಸಪ್ಪ ಕ್ಯಾತನಾಳ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ ಪಾಟೀಲ್, ಸಿಸಿಟಿ ಕಾರ್ಯಕ್ರಮ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಡಾ.ಚಂದ್ರಕಾAತ ನರಿಬೋಳ, ಡಾ.ಗುಳಗಿ, ಡಾ.ರಾಜಕುಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net