ಕುಲಶೇಖರ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿತ, ಕೊಂಕಣ ಮಾರ್ಗ ಬಂದ್‌

IMG-20210716-WA0004
Published on

ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ನಗರದ ಕುಲಶೇಖರದಲ್ಲಿ ನಿರ್ಮಾಣ ಹಂತದ ರೈಲ್ವೆ ಸುರಂಗ ಮಾರ್ಗದ ಬಳಿ ತಡೆಗೋಡೆ ಕುಸಿದು ಹಳಿಗೆ ಬಿದ್ದು, ರೈಲು ಸಂಚಾರಕ್ಕೆ ಅಡಚಣೆಯಾಗಿದೆ.
ಶುಕ್ರವಾರ ಮುಂಜಾನೆ ಘಟನೆ ಸಂಭವಿಸಿದ್ದು, ಕಾಂಕ್ರೀಟ್‌ನಿಂದ ನಿರ್ಮಿಸಲಾದ ತಡೆಗೋಡೆ ಸಹಿತ ಭಾರಿ ಪ್ರಮಾಣದ ಮಣ್ಣು ಜರಿದು ಹಳಿಯ ಮೇಲೆ ಬಿದ್ದಿದೆ. ಮಂಗಳೂರು ಜಂಕ್ಷನ್‌-ತೋಕೂರು ನಡುವಿನ ಕುಲಶೇಖರ ಬಳಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಮಣ್ಣು ತೆರವು ಕಾರ್ಯ ಆರಂಭವಾಗಿದ್ದು, ಹಳಿಯ ಮೇಲೆ ಬಿದ್ದ ಮಣ್ಣು ತೆರವುಗೊಳಿಸಿದರೂ, ಗುಡ್ಡದ ಬದಿ ಮತ್ತಷ್ಟು ಜರಿದು ಬೀಳುವ ಸಾಧ್ಯತೆಯಿದೆ. ಈ ಹಿಂದೆಯೂ ಎರಡು ಬಾರಿ ಇಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net