ಇಳೆಗೆ ತಂಪೆರೆದ ಮಳೆ

IMG-20240508-WA0351
ಮದ್ದೂರಿನಲ್ಲಿ ಮಳೆ ಬರುತ್ತಿರುವುದು.
Published on

ಮದ್ದೂರು: ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿ ಮಳೆಯಾಗಿದೆ.

ರಾತ್ರಿ 7 ಗಂಟೆ ಸುಮಾರಿಗೆ ಬಿರುಗಾಳಿ, ಮಿಂಚು, ಗುಡುಗು ಸಹಿತ ಕೆಲಕಾಲ ಮಳೆಯಾಗಿದ್ದು, ಬಿಸಿಲ ಬೇಗೆಯಲ್ಲಿ ಬೆಂದಿದ್ದ ಜನರಿಗೆ ತಂಪಿನ ಅನುಭವ ಉಂಟಾಯಿತು. ಮಳೆ ಬಂದ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.

ಮಳೆಯಿಂದ ಸಾರ್ವಜನಿಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು. ಮಳೆಯಿಂದ ಯಾವುದೇ ರೀತಿಯ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net