ಭಾರಿ ಮಳೆ ಮುನ್ಸೂಚನೆ -ಉತ್ತರ ಕನ್ನಡದ ಶಾಲೆ, ಪಿಯು ಕಾಲೇಜ್‌ಗಳಿಗೆ ರಜೆ ಘೋಷಣೆ

Kali river inflow incressed
Published on

ಕಾರವಾರ:ಇನ್ನೂ ಎರಡು ದಿನ (ಜು.24 ಹಾಗೂ 25)ಜೋರು ಮಳೆ ಮುಂದುವಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿ ದಿನ ಸರಾಸರಿ 115 ರಿಂದ 206 ಮಿಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 50 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಮಾಹಿತಿ ನೀಡಲಾಗಿದೆ.

ಆರೇಂಜ್ ಎಚ್ಚರಿಕೆ ನೀಡಲಾಗಿದೆ. ಜು.24 ರಂದು ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜ್‌ಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಇದು ಶಿರಸಿ ಹಾಗೂ ಕಾರವಾರ ಎರಡೂ ಶೈಕ್ಷಣಿಕ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಮೀನುಗಾರರು, ಸಮುದ್ರಕ್ಕೆ ಇಳಿಯದಂತೆ ಘೋಷಿಸಲಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಇಳಿಯುವುದು, ಜಲಪಾತಗಳಿಗೆ ತೆರಳು ಮೋಜು, ಮಸ್ತಿ ಮಾಡುವುದನ್ನು ತಡೆಯಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net