

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಮೂರು ವಾರಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ೧೦೦ ಕೋಟಿ ರೂ.ಗೂ ಅಧಿಕ ಹಾನಿ ಸಂಭವಿಸಿದೆ. ಪಿಆರ್ ಇಡಿ ಇಲಾಖೆಗೆ ಸಂಬAಧಿಸಿದAತೆ ೪೮ ಕೋಟಿ ರೂ. ಹಾಗೂ ಪಿಡಬ್ಲುö್ಯಡಿ ಇಲಾಖೆಗೆ ಸಂಬಧಿಸಿದAತೆ ೫೬ ಕೋಟಿ ರೂ.ಗೂ ಅಧಿಕ ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾಹಿತಿ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರಿ ಮಳೆಯಿಂದಾಗಿ ರಸ್ತೆಗಳು, ಸೇತುವೆಗಳು, ಮನೆಗಳು, ವಿದ್ಯುತ್ ಕಂಬಗಳು ಹೀಗೆ ಸಾಕಷ್ಟು ಹಾನಿ ಸಂಭವಿಸಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಜನವರಿಯಿಂದ ಜೂನ್ ೨೨ ರವರೆಗೆ ವಾಡಿಕೆಯಂತೆ ೮೮೭ ಮಿಲಿಮೀಟರ್ ಮಳೆಯಾಗಬೇಕಿತ್ತು. ಆದರೆ ೧೦೯೬ ಮಿಲಿ ಮೀಟರ್ ಮಳೆ ಯಾಗಿತ್ತು. ಕಳೆದ ಏಳು ದಿನಗಳಲ್ಲಿ ಜಿಲ್ಲೆಯಲ್ಲಿ ೧೨೪ ಮಿಲಿಮೀಟರ್ ಮಳೆಯಾಗಬೇಕಿತ್ತು ಆದರೆ ೩೨೯ ಮಿಲಿ ಮೀಟರ್ ಮಳೆಯಾಗಿದೆ. ಅಂದರೆ ಶೇಕಡ ೧೬೬% ರಷ್ಟು ಅಧಿಕ ಮಳೆಯಾಗಿದೆ. ಜಿಲ್ಲೆಯ ಎಲ್ಲಾ ೯ ತಾಲೂಕಿನಲ್ಲಿಯೂ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದೆ ಎಂದು ತಿಳಿಸಿದರು.
ಕಳೆದ ವರ್ಷ ಇದೇ ದಿನ ಭದ್ರಾ ಜಲಾಶಯದ ನೀರಿನ ಮಟ್ಟ ೧೪೪ ಅಡಿ ಇತ್ತು. ಆದರೆ ಈ ಬಾರಿ ೧೬೪ ಅಡಿ ಇದೆ. ಜಲಾಶಯಕ್ಕೆ ೪೯ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಇದೇ ರೀತಿ ಮಳೆ ಮುಂದುವರೆದಲ್ಲಿ ಇನ್ನೊಂದು ವಾರದಲ್ಲಿ ಭದ್ರಾ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಗಂಟೆಗೆ ೪೫ ರಿಂದ ೫೦ ಕಿಲೋಮೀಟರ್ ವೇಗದಲ್ಲಿ ಗಾಳಿಯು ಬೀಸುತ್ತಿರುವುದರಿಂದ ಹಾನಿಯ ಪ್ರಮಾಣ ಹೆಚ್ಚಾಗಿದೆ. ಭಾರಿ ಗಾಳಿಯಿಂದಾಗಿ ಮನೆಗಳ ಮೇಲೆ ಹಾಗೂ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿ ಬಿದ್ದು ಹೆಚ್ಚಿನ ಹಾನಿ ಸಂಭವಿಸಿದೆ ಎಂದು ವಿವರಿಸಿದರು.
ಭಾರಿ ಮಳೆಯಿಂದಾಗಿ ಜಿಲ್ಲೆಯ ೪೧ ಸೇತುವೆಗಳಿಗೆ ಹಾನಿಯಾಗಿದೆ. ಪಿಡಬ್ಲೂö್ಯಡಿ ಇಲಾಖೆಗೆ ಸೇರಿದ ೮.೫೦ ಕಿಲೋಮೀಟರ್ ರಸ್ತೆಗೆ ಹಾನಿಯಾಗಿದೆ. ಇದಲ್ಲದೆ ಶೃಂಗೇರಿ ಮಂಗಳೂರು ರಾಷ್ಟಿö್ರÃಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಆರಂಭಗೊAಡಿದೆ. ಜೊತೆಗೆ ಇದೇ ರಾಷ್ಟಿö್ರÃಯ ಹೆದ್ದಾರಿಯ ಪಕ್ಕದಲ್ಲಿ ತುಂಗಾ ನದಿ ಹಾದು ಹೋಗುತ್ತಿದ್ದು, ನದಿ ಪಕ್ಕದಲ್ಲಿ ಕಟ್ಟಲಾಗಿದ್ದ ತಡೆಗೋಡೆಗೂ ಹಾನಿಯಾಗಿದೆ. ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರದ ದಟ್ಟಣೆ ನೋಡಿಕೊಂಡು ತಡೆಗೋಡೆಯ ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪಿಆರ್ ಇಡಿ ಇಲಾಖೆಗೆ ಸೇರಿದ ಕಾಲುಸಂಕ, ಬ್ರಿಡ್ಜ್, ರಸ್ತೆ ಸೇರಿದಂತೆ ಇತರೆ ಕಾಮಗಾರಿಗಳಿಗೆ ಹಾನಿಯಾಗಿದ್ದು, ೪೮ ಕೋಟಿ ರೂ. ನಷ್ಟ ಸಂಭವಿಸಿದೆ. ಹೀಗಾಗಿ ಕೂಡಲೇ ಪರಿಹಾರ ಕಾರ್ಯಕೈಗೊಂಡು ಜನರಿಗೆ ಅನುಕೂಲ ಒದಗಿಸಲು ಎಸ್ ಡಿಆರ್ ಎಫ್ ಫಂಡ್ ನಿಂದ ನಾಲ್ಕು ಕೋಟಿ ರೂ. ನೀಡುವಂತೆ ಪ್ರಸ್ತಾವನೆ ಬಂದಿದೆ. ಎಫ್ ಡಿಆರ್‌ಎಫ್ ಅನುದಾನದಲ್ಲಿ ಹಾಳಾಗಿರುವ ಕಾಮಗಾರಿಗಳ ಪುನ ಸ್ಥಾಪನೆ ಮಾಡಲು ಅವಕಾಶವಿದೆಯೇ ಹೊರತು, ಹೊಸದಾಗಿ ಕಾಮಗಾರಿ ಮಾಡಲು ಅವಕಾಶವಿಲ್ಲ. ಹೀಗಾಗಿ ರಸ್ತೆಗಳ ರಿಪೇರಿ ಸೇತುವೆಗಳ ರಿಪೇರಿ ಹಾಗೂ ಗುಡ್ಡ ಕುಸಿತ ಕಡೆಗೆ ಮಣ್ಣು ತೆರವುಗೊಳಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಎಸ್ ಡಿ ಆರ್ ಎಫ್ ಫಂಡ್ ನಲ್ಲಿ ಹಣ ನೀಡಲಾಗುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಎಸ್ ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಉಪಸ್ಥಿತರಿದ್ದರು.
೧೯೨ ಮನೆಗಳಿಗೆ ಹಾನಿ
ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಒಟ್ಟು ೧೯೨ ಮನೆಗಳಿಗೆ ಹಾನಿ ಸಂಭವಿಸಿದೆ. ಅದರಲ್ಲಿ ೧೨೨ ಮನೆಗಳಿಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಡಿಸಿ ಮೀನಾ ನಾಗರಾಜ್ ತಿಳಿಸಿದರು.
ಹಾನಿಗೊಳಗಾದ ೭೭ ಮನೆಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಆದರೆ ೪೩ ಅನಧಿಕೃತ ಮನೆಗಳಿಗೆ ಹಾನಿಯಾಗಿದೆ. ಸರ್ಕಾರದ ಆದೇಶದಂತೆ ಅನಧಿಕೃತ ಮನೆಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಹೀಗಾಗಿ ಕಂದಾಯ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಿz್ದೆÃವೆ. ಕಂದಾಯ ಸಚಿವರಿಂದ ಸೂಕ್ತ ನಿರ್ದೇಶನ ಬಂದ ಬಳಿಕ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿz್ದÉÃವೆ ಎಂದು ತಿಳಿಸಿದರು.
ಮೂಡಿಗೆರೆ ತಾಲೂಕಿನಲ್ಲಿ ೩೦, ಚಿಕ್ಕಮಗಳೂರು ತಾಲೂಕಿನಲ್ಲಿ ೩೭, ಕಡೂರು ತಾಲೂಕಿನಲ್ಲಿ ೨೦ ಮನೆಗಳಿಗೆ ಹಾನಿಯಾಗಿದೆ. ಮಲೆನಾಡು ಭಾಗದಲ್ಲಿ ಬಾರಿ ಗಾಳಿಯಿಂದಾಗಿ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದರೆ, ಬಯಲು ಸೀಮೆ ಪ್ರದೇಶದಲ್ಲಿ ಬಾರಿ ಗಾಳಿಗೆ ಮನೆಯ ಮೇಲ್ಚಾವಣಿಗಳೆ ಹಾರಿಹೋಗಿವೆ ಎಂದು ಮಾಹಿತಿ ನೀಡಿದರು.
ಧರೆಗುರುಳಿದ ೧೮೪೯ ವಿದ್ಯುತ್ ಕಂಬ
ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ೧೮೪೯ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಉಂಟಾಗಿತ್ತು. ಹೀಗಾಗಿ ಈಗಾಗಲೇ ೧೬೯೩ ವಿದ್ಯುತ್ ಕಂಬಗಳನ್ನು ಬದಲಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಡಿಸಿ ಮೀನಾ ನಾಗರಾಜ್ ತಿಳಿಸಿದರು.
ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶ ಹಾಗೂ ವಾಹನಗಳು ಹೋಗಲು ಸಾಧ್ಯವಾಗದಿರುವ ತಳಗಳಲ್ಲಿ ಮಾತ್ರ ಇದುವರೆಗೆ ವಿದ್ಯುತ್ ಕಂಬಗಳನ್ನು ಬದಲಿಸಲು ಸಾಧ್ಯವಾಗಿಲ್ಲ. ಕೆಲವು ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡಲು ಎರಡು ಮೂರು ದಿನವಾಗುತ್ತಿದೆ. ಒಮ್ಮೆ ವಿದ್ಯುತ್ ಲೈನ್ ಸರಿಪಡಿಸಿ ಬಂದ ಬಳಿಕ ಮತ್ತೆ ಅದೇ ಲೈನ್ ಮೇಲೆಯೇ ಮರಗಳು ಬೀಳುತ್ತಿರುವುದರಿಂದಾಗಿ ಸಮಸ್ಯೆ ಹೆಚ್ಚಾಗಿದೆ ಎಂದರು.
ತೋಟಗಾರಿಕಾ ಬೆಳೆಗಳಿಗೂ ಹಾನಿ
ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ೮೦ಕ್ಕೂ ಹೆಚ್ಚು ಎಕರೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿ, ೧೯ ಲಕ್ಷ ರೂ. ನಷ್ಟ ಸಂಭವಿಸಿದೆ. ಇದೇ ರೀತಿ ಮಳೆ ಮುಂದುವರೆದಲ್ಲಿ ತೋಟಗಾರಿಕಾ ಬೆಳೆಗಳಿಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇದೆ ಎಂದು ಡಿಸಿ ಮೀನಾ ನಾಗರಾಜ್ ತಿಳಿಸಿದರು.
ಕಾಫಿ ಬೆಳಗೆ ಕೊಳೆರೋಗ ಕಾಣಿಸಿಕೊಂಡಿದೆ ಎಂದು ಕಾಫಿ ಬೆಳೆಗಾರರು ಮಾಹಿತಿ ನೀಡಿದ್ದಾರೆ. ಕಾಫಿಯ ಜೊತೆಗೆ ಕಾಳು ಮೆಣಸು ಏಲಕ್ಕಿ ಬೆಳೆಗಳಿಗೂ ಏನಾದರೂ ಸಮಸ್ಯೆಯಾಗಿದೆಯೇ ಎಂದು ಪರಿಶೀಲನೆ ನಡೆಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿz್ದÉÃನೆ ಎಂದು ತಿಳಿಸಿದರು.
ಚಾರ್ಮಾಡಿ ಘಾಟಿಯಲ್ಲಿ ಸಂಚಾರ ನಿಯಂತ್ರಣ
ಸAಪಾಜೆ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಶಿರಡಿ ಘಾಟಿಯಲ್ಲಿ ಹಗಲು ಸಂಚಾರಕ್ಕೆ ಅವಕಾಶವಿರುವುದೆ. ಹೀಗಾಗಿ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರದಟ್ಟಣೆ ಹೆಚ್ಚಾಗುತ್ತಿದೆ ಎಂದು ಡಿಸಿ ಮೀನಾ ನಾಗರಾಜ್ ತಿಳಿಸಿದರು.
ಈಗಾಗಲೇ ಚಾರ್ಮಾಡಿ ಘಾಟಿಕೆ ಭೇಟಿ ನೀಡಿ ಪರಿಶೀಲನೆ ನಡೆಸಿz್ದÉÃವೆ, ಜೊತೆಗೆ ಹಾಸನ, ಉಡುಪಿ, ಮಂಗಳೂರು ಜಿಲ್ಲಾಧಿಕಾರಿಗಳ ಜೊತೆಯೂ ಚರ್ಚೆ ಮಾಡಿz್ದÉÃವೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಲಿ ಕೊಟ್ಟಿಗೆಹಾರದಲ್ಲಿರುವ ಚೆಕ್ ಪೋಸ್ಟ್ ಬಳಿಯೇ ವಾಹನಗಳನ್ನು ನಿಯಂತ್ರಿಸಲಾಗುತ್ತದೆ ಹಾಗೂ ನಿಯಮಿತ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮುಳ್ಳಯ್ಯನಗಿರಿ ಪ್ರವೇಶ ಇನ್ನೊಂದು ವಾರ ಬಂದ್
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಹಾಗೂ ದತ್ತಪೀಠದ ಪ್ರವೇಶಕ್ಕೆ ಪ್ರವಾಸಿಗರಿಗೆ ಇನ್ನೊಂದು ವಾರ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಮುಳ್ಳಯ್ಯನಗಿರಿ ಭಾಗದಲ್ಲಿ ಗುಡ್ಡ ಕುಸಿತ ಹೆಚ್ಚಾಗಿದೆ. ಜೊತೆಗೆ ಗಿರಿ ಪ್ರದೇಶಕ್ಕೆ ತೆರಳುವ ರಸ್ತೆಗಳಲ್ಲಿ ಕೊರಕಲುಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿತವಾದ ಮಣ್ಣನ್ನು ತೆರವುಗೊಳಿಸಲು ಹಾಗೂ ರಸ್ತೆ ದುರಸ್ತಿ ಮಾಡಲು ಇನ್ನೊಂದು ವಾರ ಬೇಕು ಎಂದು ಪಿಡಬ್ಲುö್ಯಡಿ ಅಧಿಕಾರಿಗಳು ತಿಳಿಸಿರುವುದರಿಂದಾಗಿ ಗಿರಿ ಪ್ರದೇಶಕ್ಕೆ ಇನ್ನೊಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಪ್ರವಾಸಿಗರು ಸುರಿಯುತ್ತಿರುವ ಮಳೆಯಲ್ಲಿ ಜಿಲ್ಲೆಗೆ ಪ್ರವಾಸಕ್ಕೆ ಬರಬಾರದು ಎಂದು ಮನವಿ ಮಾಡುವುದಾಗಿ ಡಿಸಿ ತಿಳಿಸಿದರು.