

ಚಿಕ್ಕಮಗಳೂರು: ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉರುಳಿಬಿದ್ದ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.
ಕ್ವಾಲೀಸ್ ಕಾರು ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿತ್ತು. ಬೆಳಗ್ಗೆಯಿಂದ ಈ ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿರುವುದರಿಂದ ಜಾವಳಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಒಮ್ಮೆಲೆ ಹರಿಯುವ ನೀರಿನ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ.
ಇನ್ನು ಇದೇ ಸ್ಥಳದಲ್ಲಿ ಒಂದೇ ತಿಂಗಳಲ್ಲಿ ಮೂರು ಅಪಘಾತಗಳಾಗಿವೆ. ತಡೆಗೋಡೆ ಇಲ್ಲದಿರುವುದು ಅಪಾಘಾತಗಳಿಗೆ ಕಾರಣವೆಂದು ತಿಳಿದಿದ್ದರು. ಸರಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್)