ಮೇ 18 ರಿಂದ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ, ಮಲೆನಾಡಲ್ಲಿ ಆರೆಂಜ್ ಅಲರ್ಟ್

Heavy Rain
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ.

ಭಾನುವಾರವೂ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದ್ದು, ಬಾಗಲಕೋಟೆಯಲ್ಲಿ 87 ಮಿಮೀ, ಕೋಲಾರದ ಟಮಕಾದಲ್ಲಿ 77 ಮಿಮೀ, ಮೈಸೂರಿನ ಸುತ್ತೂರಿನಲ್ಲಿ 21 ಮಿಮೀ ಮಳೆ ಬಿದ್ದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ೋಷಿಸಲಾಗಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್,ವಿಜಯಪುರ, ರಾಯಚೂರು, ಕಲಬುರಗಿ, ರಾದಗಿರಿ, ಕೊಪ್ಪಳ,ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net