

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ(Heavy Rain) ಹಲವು ಭಾಗಗಳು ಜಲಾವೃತಗೊಂಡಿದ್ದು ರಾಜ್ಯ ಸರ್ಕಾರವು ನಗರದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಬುಧವಾರ (ಅಕ್ಟೋಬರ್ 16) ರಜೆ ಘೋಷಿಸಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಅವರು ಮಂಗಳವಾರ(ಅಕ್ಟೋಬರ್ 15) ಆದೇಶ ಹೊರಡಿಸಿದ್ದಾರೆ.
ಮುಂದಿನ ಕೆಲವು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಗುರುವಾರ ರಜೆ ಇದ್ದು, ಮಳೆ ಹಿನ್ನೆಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20ರವರೆಗೆ ದಸರಾ ರಜೆ ಇದೆ. ಆದರೆ ಖಾಸಗಿ ಶಾಲೆಗಳು ಈಗಾಗಳೆ ತರಗತಿಗಳನ್ನು ಆರಂಭ ಮಾಡಿದೆ. ಸೋಮುವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ. ಭಾರೀ ಮಳೆ ಹಿನ್ನೆಲೆ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಆಗುವುದರಿಂದ ರಾಜಧಾನಿಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ.