ಚನ್ನರಾಯಪಟ್ಟಣದಲ್ಲಿ ತಂಪೆರೆದ ಮಳೆ

ಫೋಟೋ ಶೀರ್ಷಿಕೆ 08 ಸಿಆರ್_ಪಿ-2ಎ..
ಚನ್ನರಾಯಪಟ್ಟಣದಲ್ಲಿ ಭಾನುವಾರ ಸುರಿದ ಮಳೆ.
Published on

ಚನ್ನರಾಯಪಟ್ಟಣ: ಬಿಸಿಲಿನ ಧಗೆಗೆ ಬಸವಳಿದು ಹೋಗಿದ್ದ ಪಟ್ಟಣದ ಜನತೆಗೆ ಭಾನುವಾರ ಮಧ್ಯಾಹ್ನ ಸುರಿದ ಮಳೆಯಿಂದಾಗಿ ನಾಗರಿಕರು ಕೊಂಚ ನಿಟ್ಟುಸಿರು ಬಿಡುವಂತಾಯಿತು.

ಭಾನುವಾರ ಬೆಳಗ್ಗೆಯಿಂದಲೇ ಪಟ್ಟಣದ ಸುತ್ತಮುತ್ತ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆರಂಭಗೊಂಡ ಮಳೆ ಸುಮಾರು 40 ನಿಮಿಷಗಳ ಕಾಲ ಎಡೆಬಿಡದೆ ಪಟ್ಟಣ ಸೇರಿದಂತೆ ಸುಮುತ್ತಲಿನ ಗ್ರಾಮಗಳಲ್ಲಿ ಸುರಿದಿದೆ. ಪಟ್ಟಣ ಮಾತ್ರವಲ್ಲದೆ ತಾಲೂಕಿನ ಕೆಲ ಗ್ರಾಮಗಳಲ್ಲೂ ಕೆಲ ಹೊತ್ತು ತುಂತುರು ಮಳೆಯಾಗಿದೆ.

ತಾಲೂಕಿನ ರೈತಾಪಿ ವರ್ಗ ಈ ಅವಧಿಯಲ್ಲಿ ಮಳೆಯ ನಿರೀಕ್ಷೆಯಲ್ಲಿದ್ದರು. ಕಳೆದೊಂದು ತಿಂಗಳಿನಿಂದ ಮಳೆ ಬಾರದಿರುವುದರಿಂದ ರಾಗಿ ಹಾಗೂ ಮುಸುಕಿನ ಜೋಳ ಸಂಪೂರ್ಣ ನೆಲಕಚ್ಚಿದ್ದು, ತೆಂಗಿನ ತೋಟಗಳು ನೀರಿಲ್ಲದೆ ಬರಡಾಗಿದೆ. ಇನ್ನು ಹೈನುಗಾರಿಕೆಯನ್ನೇ ನಂಬಿರುವ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಹರಸಾಹಸ ಪಡುವಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net