ದಕ್ಷಿಣ ಕನ್ನಡ ಬಿರುಸುಗೊಂಡ ಮಳೆ, ಯುವಕ ಸಾವು

Rains
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಮುಂದುವರಿದ್ದು, ಯುವಕನೋರ್ವ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಹಲವು ಕಡೆಗಳಲ್ಲಿ ಮನೆಗಳಿಗೆ ಮರ ಬಿದ್ದು ಹಾನಿಯಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಬೆಳಗ್ಗಿನಿಂದಲೇ ಗಾಳಿ ಸಹಿತ ಮಳೆಯಾಗುತ್ತಿದೆ.


ಸುರತ್ಕಲ್ ಬಳಿಯ ಕುಳಾಯಿ ನಿವಾಸಿ ಸಂತೋಷ್ ಮೃತಪಟ್ಟವರು. ಬೆಳಗ್ಗೆ ಕೆಲಸಕ್ಕೆಂದು ಕೈಗಾರಿಕಾ ಪ್ರದೇಶಕ್ಕೆ ಹೋಗುತ್ತಿದ್ದಾಗ ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ಅದಕ್ಕೆ ಮೆಟ್ಟಿದ್ದಾರೆ. ಈ ಸಂದರ್ಭ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಲ ಕಿನಾರೆಗಳಲ್ಲಿ ಮನೆಗಳು ಹಾನಿಗೀಡಾಗಿವೆ. ಸಮುದ್ರ ಬಿರುಸುಗೊಂಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುತ್ತಿಲ್ಲ. ಪ್ರವಾಸಿಗರು ಸಮುದ್ರ ಕಿನಾರೆಗೆ ಬರದಂತೆ ಎಚ್ಚರಿಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net