ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ

IMG_20230509_131840_203.jpg
Published on

ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಿಡಿಲಿನ ಅಬ್ಬರದ ಮಳೆ ಸುರಿಯಿತು.

ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನರಿಗೆ ತಂಪಿನ ವಾತಾವರಣದ ಅನುಭವ ನೀಡಿತು.

ಸೋಮವಾರ ಕೂಡ ಸಂಜೆ ಒಂದಿಷ್ಟು ಮಳೆಯಾಗಿ ಇಳೆ ತಂಪಾಗಿತ್ತು.

ಸೈಕ್ಲೋನ್ ಎಫೆಕ್ಟನಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಉಳುಮೆಗೆ ಅನುಕೂಲ ಮಾಡಿಕೊಟ್ಟಿದೆ.

ಜೂನ್ ಮೊದಲ ವಾರ ಮುಂಗಾರು ಆರಂಭವಾಗುವ ಹಿನ್ನಲೆಯಲ್ಲಿ ಸದ್ಯ ಭೂಮಿ ಹದಗೊಳಿಸಲು ಮಳೆಯ ಅವಶ್ಯಕತೆ ಇತ್ತು ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಮಳೆ ಅಬ್ಬರ...
ಹುಬ್ಬಳ್ಳಿಯಲ್ಲಿ ಮಳೆ ಅಬ್ಬರ...
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net