ನ.25ರಿಂದ ರಾಜ್ಯದಲ್ಲಿ ಭಾರಿ ಮಳೆ: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Chennai Rain
Published on

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನ.25ರಿಂದ ಎರಡು ದಿನ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ನ.26ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net