ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಮಳೆ

Dakshina Kannada Rain
Published on

ಮಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮಳೆ ಅಬ್ಬರಿಸಲು ಆರಂಭಿಸಿದೆ. ಮಂಗಳೂರು ನಗರ, ದಕ್ಷಿಣ ಕನ್ನಡದ ಒಳಭಾಗಗಳು, ಉಡುಪಿ ಜಿಲ್ಲೆಗಳಿಂದಲೂ ತೀವ್ರ ಮಳೆಯಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ.

ಭಾರಿ ಮಳೆಯಿಂದಾಗಿ ಅಲ್ಲಲ್ಲಿ ರಸ್ತೆ ಮೇಲೆ‌ ನೀರು ಸೇರಿಕೊಂಡಿದೆ. ಮುಂಜಾನೆಯಿಂದಲೇ ಮಳೆ ಸುರಿಯುತ್ತಿರುವ ಕಾರಣ ಜನಜೀವನಕ್ಕೆ ತೊಡಕುಂಟಾಗಿದೆ. ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು‌ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ‌ ಮುನ್ನೆಚ್ಚರಿಕೆ ನೀಡಲಾಗಿದೆ.

ಕಳೆದ ಎರಡು ದಿನದಿಂದಲೇ ಹದವಾದ ಮಳೆ ಹಾಗೂ ಗಾಳಿ ಬೀಸುತ್ತಿದ್ದು, ಸೋಮವಾರ ತಡರಾತ್ರಿಯಿಂದಲೇ ಮಳೆಯ ತೀವ್ರತೆ ಹೆಚ್ಚಿತು. ಜಿಲ್ಲೆಯ ಹಲವೆಡೆ ಭತ್ತದ ಪೈರು ಕೊಯ್ಲಿಗೆ ಬಂದಿದ್ದು, ಮಳೆ ಮುಂದುವರಿದರೆ ರೈತರಿಗೆ ಸಮಸ್ಯೆಯಾಗುವ ಭೀತಿ ಎದುರಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಇನ್ನೂ ಮೂರು ದಿನ ಮಳೆ ಇರುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net