ಮೈಸೂರಿನಲ್ಲಿ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Rain in mysore
Published on

ಮೈಸೂರು: ಜಿಲ್ಲೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ಮಳೆಯ ಆರ್ಭಟ ಮತ್ತೆ ಮುಂದುವರೆಯಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಅ.26ರವರೆಗೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ನಗರದಲ್ಲಿ ಮಧ್ಯಾಹ್ನ ದಿಢೀರಾಗಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ತುಂತುರು ಮಳೆ ಸುರಿಯಿತು. ಮಳೆಯಿಂದ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯಾಗುವ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಅ.22 ಮತ್ತು 23 ರಂದು 15 ಮಿ.ಮೀ., 24 ರಂದು 10 ಮಿ.ಮೀ., 25 ರಂದು 12 ಮಿ.ಮೀ., 26 ರಂದು 10 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗಾಳಿಯು ಗಂಟೆಗೆ 6 ರಿಂದ 8 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ತಾಪಮಾನ ಕನಿಷ್ಠ 19 ಹಾಗೂ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ ನಾಗಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಸಿ.ರಾಮಚಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯೆಲ್ಲೋ ಅಲರ್ಟ್: ಮೈಸೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ಗುಡುಗಿನೊಂದಿಗೆ ಮಳೆಯು ಆರ್ಭಟಿಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net