ಜಿಲ್ಲಾದ್ಯಂತ ಮಳೆ ಅಬ್ಬರ: ಶಾಲೆಗಳಿಗೆ ರಜೆ ಘೋಷಣೆ
ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಆದೇಶ

IMG-20220830-WA0023.jpg
Published on

ವಿಜಯವಾಣಿ ಸುದ್ದಿಜಾಲ ಹೊಸಪೇಟೆ
ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಬೆಳಗಿನ ಜಾವ ೫.೩೦ ರಿಂದ ಮಳೆ ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಒಂದು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸೆ.೪ ರಂದು ಭಾನುವಾರ ತರಗತಿಗಳನ್ನು ನಿರ್ವಹಿಸುವ ಮೂಲಕ ಇಂದಿನ ರಜಾ ದಿನವನ್ನು ಸರಿದೂಗಿಸುವಂತೆ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಆದೇಶಿಸಿದ್ದಾರೆ ಎಂದು ಡಿಡಿಪಿಐ ಜಿ. ಕೊಟ್ರೇಶ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net