ಮಳೆ ಅಬ್ಬರ: ಅಂಗನವಾಡಿ ಶಾಲೆ, ಕಾಲೇಜಿಗೆ ರಜೆ

IMG20230724161627
Published on

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜು.೨೭ ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ೮ ಗಂಟೆ ವರೆಗೆ ಹೂವಿನಹಡಗಲಿಯಲ್ಲಿ ೨೬.೨ ಮಿ.ಮೀ., ಹಗರಿಬೊಮ್ಮನಹಳ್ಳಿ ೨೯.೯ ಮಿ.ಮೀ.,ಹರಪನಹಳ್ಳಿ ೩೫.೧ ಮಿ.ಮೀ., ಹೊಸಪೇಟೆ ೩೫.೯ ಮಿ.ಮೀ., ಕೂಡ್ಲಿಗಿ ೩೫.೨ ಮಿ.ಮೀ., ಕೊಟೂರು ೩೦ ಮಿ.ಮೀ. ಮಳೆ ದಾಖಲಾಗಿದೆ. ಅಲ್ಲದೇ, ಗುರುವಾರವೂ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯ ನಿಮಿತ್ತ ಘೋಷಿಸಿದ ರಜೆಯನ್ನು ಮುಂದಿನ ಭಾನುವಾರ ನಡೆಸಿ, ಸರಿದೂಗಿಸಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯ ಹೂವಿನಹಡಗಲಿ, ಕೂಡ್ಲಿಗಿ, ಕೊಟ್ಟೂರು ಮತ್ತು ಹರಪನಹಳ್ಳಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆ ಅಬ್ಬರ ಮುಂದುವರಿದಿದ್ದರಿAದ ಜಿಲ್ಲೆಯ ಎಲ್ಲ ತಾಲೂಕಿನ ಶಾಲೆ, ಕಾಲೇಜು ಮತ್ತು ಅಂಗನವಾಡಿಗೂ ರಜೆ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net