

ಕಾರವಾರ: ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜು.27 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಜಿಲ್ಲೆಯ 11 ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜ್‌ಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ,ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೊಯಿಡಾ, ಶಿರಸಿ, ಯಲ್ಲಾಪುರ ಹಾಗೂ ಸಿದ್ದಾಪುರ ಹಾಗೂ ಹಳಿಯಾಳ ತಾಲೂಕುಗಳಿಗೆ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶದಲ್ಲಿ ತಿಳಿಸಿದ್ದಾರೆ.
ಜುಲೈ 15 ರಿಂದ ಜಿಲ್ಲೆಯ ಶಾಲೆ, ಪಿಯು ಕಾಲೇಜ್‌ಗಳಿಗೆ ನಿರಂತರವಾಗಿ ರಜೆ ಘೋಷಿಸಲಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಕಳೆದ 12 ದಿನದಲ್ಲಿ 1 ದಿನ ಮಾತ್ರ ಶಾಲೆ ನಡೆದಿದೆ.