

ಬೆಂಗಳೂರು: ಮುಂದಿನ 6 ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( Weather News ) ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರ್ನಾಟಕ, ಗೋವಾ, ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಎಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು,ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.11 ರಿಂದ 16 ರವರೆಗೆ ಮಳೆಯಾಗಲಿದೆ.
ಕರ್ನಾಟಕದಲ್ಲಿ ಆಕ್ಟೊಬರ್ 11 ರಿಂದ 14 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ ದಾವಣಗೆರೆ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆಯಾಗಲಿದೆ. ಇನ್ನು ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆಯಿದೆ