ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆ: ಹಲವೆಡೆ ಯೆಲ್ಲೋ ಅಲರ್ಟ್

rain
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ.

ಚಿಕ್ಕಮಗಳೂರಿನ ಮೂಡುಗೆರೆ, ಚಾಮರಾಜನಗರದ ಹರದನಹಳ್ಳಿ, ಮಂಡ್ಯ, ಮೈಸೂರಿನ ಹುಣಸೂರು ಹಾಗೂ ತುಮಕೂರಿನ ಕೋನಹಳ್ಳಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಮಳೆ ಬಿದ್ದಿದೆ. ಉಡುಪಿ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಹಾಗೂ ಚಿಕ್ಕಮಗಳೂರು, ಕೊಡಗಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮೂನ್ಸೂಚನೆ ಕೊಟ್ಟಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ರಾಮನಗರದಲ್ಲಿ ನ.7ರಂದು ಯೆಲ್ಲೋ ಅಲರ್ಟ್ ಇರಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರಿನಲ್ಲಿ ನ.8ರಿಂದ ನ.10ರವರೆಗೆ ಗುಡುಗು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ.ನೆರೆಯ ತಮಿಳುನಾಡು, ಕೇರಳದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಆ ಜಿಲ್ಲೆಗಳಲ್ಲಿ ಬಿರುಸಾಗಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net