ರಾಜ್ಯದ ಹಲವೆಡೆ ಮಳೆ ಅಬ್ಬರ: ನಾಳೆ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​

delhi rains
Published on

ಬೆಂಗಳೂರು: ಮುಂಗಾರು ಚುರುಕು ಪಡೆದ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಕೊಪ್ಪಳದ ಗಂಗಾವತಿ, ಬೆಂ.ಗ್ರಾಮಾಂತರ ದೊಡ್ಡಬಳ್ಳಾಪುರ, ಹೆಸರುಟ್ಟ, ದಕ್ಷಿಣ ಕನ್ನಡದ ಮಂಗಳೂರು, ದಾವಣಗೆರೆ, ಗದಗ ಸೇರಿ ಇತರೆ ಭಾಗಗಳಲ್ಲಿ ಭಾನುವಾರ ವರ್ಷಧಾರೆಯಾಗಿದೆ. ಬೆಳಗಾವಿ, ವಿಜಯಪುರದಲ್ಲಿ ಸೆ.23 ರಿಂದ ಮುಂದಿನ ಎರಡು ದಿನ ಹಾಗೂ ಧಾರವಾಡ, ಹಾವೇರಿ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಸೆ.23ರಂದು ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಸೆ.24ರಿಂದ ಸೆ.25ರವರೆಗೆ ಜೋರಾಗಿ ವರ್ಷಧಾರೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಇರಲಿದೆ. ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್​ ಮತ್ತು ಬಾಗಲಕೋಟೆಯಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ. ಸೆ.26ರಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net