

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ, ಪ್ರಶಸ್ತಿ ಪ್ರದಾನ ಹೆಬ್ರಿ ಸಮೀಪದ ಇಂದಿರಾನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು.
ಹೆಬ್ರಿ ತಾಲೂಕು ಕಸಾಪ ಘಟಕ ಅಧ್ಯಕ್ಷ ಮುದ್ದೂರು ಶ್ರೀನಿವಾಸ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ, ನಾಡು-ನುಡಿಗೆ ಶ್ರಮಿಸಿದ ಹಿರಿಯರಾದ ಹೆಬ್ರಿ ರಾಗಿಹಕ್ಲು ನಿವಾಸಿ ನಿವೃತ್ತ ಪ್ರಥಮ ದರ್ಜೆ ಸಹಾಯಕ ಕೆ.ಗಂಗಾಧರ ರಾವ್ ದಂಪತಿಗೆ ಹೆಬ್ರಿ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಹಿಳೆಯರು ಸಮೂಹ ಕನ್ನಡ ನಾಡುಗೀತೆ ನಡೆಸಿಕೊಟ್ಟರು. ಹೆಬ್ರಿ ಲಯನ್ಸ್ ಕ್ಲಬ್ ಅಧ್ಯಕ್ಷ ಸೀತಾನದಿ ನಾಗೇಶ್ ನಾಯಕ್, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸುರೇಶ್ ಭಂಡಾರಿ, ಹೆಬ್ರಿ ಗ್ರಾಪಂ ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ, ಮುಖ್ಯ ಶಿಕ್ಷಕ ರಾಮಾಂಜನೇಯ, ನಿವೃತ್ತ ಪ್ರಾಂಶುಪಾಲ ಡಾ.ವಾಸುದೇವ ಭಟ್, ಎಸ್‌ಡಿಎಂಸಿ ಅಧ್ಯಕ್ಷೆ ಜ್ಯೋತಿ ಹಾಜರಿದ್ದರು.
ಪುಷ್ಪಾವತಿ ಹೆಬ್ರಿ ಪ್ರಾರ್ಥಿಸಿದರು. ಮಹೇಶ್ ಹೈಕಾಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಮಂಜುನಾಥ ಶಿವಪುರ ನಿರೂಪಿಸಿದರು. ಸಂಫಟನಾ ಕಾರ್ಯದರ್ಶಿ ಪ್ರೀತೇಶ್ ಕುಮಾರ್ ಶೆಟ್ಟಿ ವಂದಿಸಿದರು. ಪೂರ್ಣೇಶ್ ಹೆಬ್ರಿ ಸನ್ಮಾನ ಪತ್ರ ವಾಚಿಸಿದರು.