ಮಳೆಗೆ 39.55 ಹೆಕ್ಟೆರ್ ಪ್ರದೇಶದ ದ್ರಾಕ್ಷಿ, ಟೋಮೊಟೋ, ಮಾವು ಬೆಳೆಗಳ ಹಾನಿ

11CBP1a
Published on

ಚಿಕ್ಕಬಳ್ಳಾಪುರ: ಮಳೆ ಹಾನಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಚಿಕ್ಕಬಳ್ಳಾಪುರ:ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಇತ್ತೀಚಿಗೆ ಬಿದ್ದ ಮಳೆಯಿಂದಾಗಿ ಜಿಲ್ಲೆಯಲ್ಲಿ 39.55 ಹೆಕ್ಟೆರ್ ಪ್ರದೇಶದ ದ್ರಾಕ್ಷಿ, ಟೋಮೊಟೋ, ಮಾವು ಬೆಳೆಗಳಿಗೆ ಹಾನಿಯಾಗಿದೆ. ಕೂಡಲೇ ರೈತರಿಗೆ ಪರಿಹಾರ ಒದಗಿಸಲು ತಂತ್ರಾಂಶದಲ್ಲಿ ಮಾಹಿತಿ ನಮೂದಿಸಬೇಕು. ತ್ವರಿತ ಅನುದಾನವನ್ನು ಬಿಡುಗಡೆಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಮುಂಬರುವ ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು ಹಾನಿಗೊಳಗಾದ ಕೂಡಲೇ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಇತರ ಇಲಾಖೆಗಳ ಸಮನ್ವಯದೊಂದಿಗೆ ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ವಿಳಂಬ ಧೋರಣೆ ತೋರಬಾರದು ಎಂದು ಸೂಚಿಸಲಾಯಿತು.

*ಸಾಂಕ್ರಾಮಿಕ ರೋಗ ಸಮಸ್ಯೆ

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಡಿವಾಣ ಹಾಕಲು ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.

ಜಿಲ್ಲೆಯಲ್ಲಿ ಡೆಂಗ್ಯೂ, ಕಾಲರಾ ಹಾಗೂ ಇತರೆ ಕೀಟ ಜನ್ಯ, ಜಲ ಜನ್ಯ ಕಾಯಿಲೆಗಳನ್ನು ನಿಯಂತ್ರಿಸಬೇಕು. ಇದಕ್ಕೆ ನೀರಿನ ಸಂಗ್ರಹಣಾ ತಾಣಗಳ ಸ್ವಚ್ಛವಾಗಿಟ್ಟುಕೊಳ್ಳಬೇಕು. ಜನರಿಗೆ ಶುದ್ದವಾದ ಕುಡಿಯುವ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

* ಜಿಲ್ಲೆಯಲ್ಲಿ ಮಳೆ ಹಾನಿ

ಇತ್ತೀಚಿಗೆ ಬಿದ್ದ ಸಿಡಿಲು ಬಡಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದು ನಿಯಮಾನುಸಾರ ಕುಟುಂಬಕ್ಕೆ ಪರಿಹಾರವನ್ನು ಒದಗಿಸಲಾಗಿದೆ. ಮಳೆಯಿಂದಾಗಿ ಒಂದು ಮನೆ ಹಾನಿಗೊಳಗಾಗಿದೆ. 176 ವಿದ್ಯುತ್ ಕಂಬಗಳು, 15 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net