

ಪಡುಬಿದ್ರಿ: ಗ್ರಾಮಸ್ಥರಿಗೆ ಉತ್ತಮ ಸೇವೆ ನೀಡುವ ಮೂಲಕ ಭವಿಷ್ಯದಲ್ಲಿ ಹೆಜಮಾಡಿ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವಂತಾಗಲಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಹೆಜಮಾಡಿ ಗ್ರಾಪಂ ಕಚೇರಿ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಹಾರೈಸಿದರು. ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ, ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಹಾಗೂ ದಾನಿಗಳನ್ನು ಗೌರವಿಸಲಾಯಿತು. ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಸಚಿನ್, ಗುತ್ತಿಗೆದಾರ ಕುತ್ಯಾರ್ ಪ್ರಸಾದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ಪ್ರತಿಭಾ ಆರ್, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಗ್ರಾ.ಪಂ ಅಧ್ಯಕ್ಷೆ ರೇಷ್ಮಾ ಎ.ಮೆಂಡನ್, ಉಪಾಧ್ಯಕ್ಷ ಮೋಹನ್ ಸುವರ್ಣ, ತಾಪಂ ಇಒ ಜೇಮ್ಸ್ ಡಿ ಸಿಲ್ವ, ಸಹಾಯಕ ಲೆಕ್ಕಾಧಿಕಾರಿ ಸುಂದರ್ ನಾಯ್ಕ, ಕಂದಾಯ ನೀರಿಕ್ಷಕ ಇಜಾಜ್ ಸಾಬಿರ್, ಗ್ರಾಮ ಆಡಳಿತಾಧಿಕಾರಿ ಶ್ರೀಕಾಂತ್, ಕಾರ್ಯದರ್ಶಿ ದೀಪ ರಾವ್, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಕೆ.ಎಸ್ ಇನಾಯತ್ ಸ್ವಾಗತಿಸಿದರು. ಪವಿತ್ರ ಗಿರೀಶ್ ವಂದಿಸಿದರು. ಚಂದ್ರಶೇಖರ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.